ಹಾವೇರಿ: ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ತಂದೆ ಶೇಖರಪ್ಪ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 25 ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.
ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸಕ್ಕೆ ತೆರಳಿದ ಸಿಎಂ ಕುಟುಂಬದವರಿಗೆ ಸಾಂತ್ವನ ಹೇಳಿ 25 ಲಕ್ಷ ರೂ ಚೆಕ್ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ನವೀನ್ ತಂದೆ ಶೇಖರಪ್ಪ, ತಾಯಿ ವಿಜಯಲಕ್ಷ್ಮಿ, ಸಹೋದರ ಹರ್ಷ, ವಚನಾನಂದ ಸ್ವಾಮೀಜಿ, ಸಚಿವ ಬಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಮೊದಲಾದವರು ಇದ್ದರು.