ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ ಸಚೇತಕರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ವೇತನ ಹೆಚ್ಚಳಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ವಿಧಾನಮಂಡಲದವರ ಸಂಬಳ, ನಿವೃತ್ತಿ ವೇತನ ಮತ್ತು ಭತ್ಯೆಗಳು(ತಿದ್ದುಪಡಿ) ವಿಧೇಯಕ 2022 ಹಾಗೂ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ(ತಿದ್ದುಪಡಿ) ವಿಧೇಯಕ 2022ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು ಅಧಿಸೂಚನೆ ಹೊರಡಿಸಲಾಗಿದೆ.
ಕಳೆದ ಜಂಟಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮುಖ್ಯಮಂತ್ರಿಗಳು, ಸಚಿವರು, ಸಭಾಧ್ಯಕ್ಷರು, ಸಭಾಪತಿಗಳು, ಹಾಗೂ ಶಾಸಕರ ವೇತನ, ನಿವೃತ್ತಿ ವೇತನವನ್ನು ಸರಾಸರಿ ಶೇ 50 ರಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡು ವಿಧೇಯಕಕ್ಕೆ ಅಂಗೀಕಾರ ನೀಡಲಾಗಿತ್ತು. ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಕಿತ ಹಾಕಿದ್ದು, ಅಧಿಸೂಚನೆ ಹೊರಡಿಸಲಾಗಿದೆ.