ಬೆಂಗಳೂರು: ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ವಕೀಲ ಜಗದೀಶ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಕೂಡ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ.
ಗಲಾಟೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಜಗದೀಶ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ. ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂದು ತಿಳಿಸಿದೆ. ಅಲ್ಲದೇ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಿದೆ.
ಫೆ.11ರಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಜಗದೀಶ್ ಹಾಗೂ ಅವರ ಪುತ್ರನ ಮೇಲೆ ಹಲ್ಲೆ ನಡೆದಿತ್ತು. ಈ ವೇಳೆ ಗಲಾಟೆ ನಡೆಸುವಂತೆ ಜಗದೀಶ್ ಬೆಂಬಲಿಗರನ್ನು ಪ್ರಚೋದಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರನ್ನು ಬಂಧಿಸಲಾಗಿತ್ತು.
ಇದೀಗ ಜಗದೀಶ್ ಅವರಿಗೆ ಜಾಮೀನು ಸಿಕ್ಕಿದೆ ಆದರೂ ಈಗಲೇ ಬಿಡುಗಡೆ ಸಾಧ್ಯವಿಲ್ಲ ಎನ್ನಲಾಗಿದೆ. ಜಗದೀಶ್ ವಿರುದ್ಧದ ಇನ್ನೆರಡು ಪ್ರಕರಣದಲ್ಲಿ ಜಾಮೀನು ಬಳಿಕ ಬಿಡುಗಡೆ ಸಾಧ್ಯವಾಗಲಿದೆ ಎಂದು ತಿಳಿದುಬಂದಿದೆ.