ಶಿವಮೊಗ್ಗ: ಇತ್ತೀಚೆಗೆ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೃತ ಹರ್ಷ ನಿವಾಸಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದರು.
ನಕಲಿ ಕೀ ಬಳಸಿ ಬ್ಯಾಂಕ್ ದರೋಡೆ; ಬರೋಬ್ಬರಿ 4 ಕೋಟಿ ನಗದು, 1.5 ಕೋಟಿ ಚಿನ್ನಾಭರಣ ದೋಚಿದ ಖದೀಮರು
ಈ ವೇಳೆ ಮಾತನಾಡಿದ ಯಡಿಯೂರಪ್ಪ, ಭಜರಂಗದಳ ಕಾರ್ಯಕರ್ತನ ಹತ್ಯೆ ಖಂಡನೀಯ. ಆತನ ಬೆಳವಣಿಗೆ ಸಹಿಸಲಾಗದೇ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವುದನ್ನು ಬಿಟ್ಟು ಬೇರೇನೂ ಮಾಡಲಾಗದು. ಇಂತಹ ಘಟನೆಗಳು ರಾಜ್ಯದಲ್ಲಿ ಮತ್ತೆ ಮರುಕಳಿಸಬಾರದು. ಪ್ರಧಾನಿ ಮೋದಿ ಕೂಡ ಈ ದುರಂತವನ್ನು ಖಂಡಿಸಿದ್ದಾರೆ ಎಂದು ಹೇಳಿದರು.