ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-| ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 2022ರ ಮಾರ್ಚ್ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ www.bcwd.karnataka.gov.in ಸಂಪರ್ಕಿಸಬಹುದು ಹಾಗೂ ವೆಬ್ಸೈಟ್ www.ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2022ರ ಮಾರ್ಚ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ದೂರವಾಣಿ ಸಂಖ್ಯೆ.: 8050770005, 8050770004, ಇಮೇಲ್: www.scholarship@karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: 080-35254757, 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.