ಮೊಹಾಲಿ: ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ನಲ್ಲಿ ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಈ ಸಾಧನೆ ಮಾಡಿದ್ದಾರೆ. ಕಪಿಲ್ ದೇವ್ ಅವರ 434 ವಿಕೆಟ್ ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದ ಅಶ್ವಿನ್ 436 ವಿಕೆಟ್ ಗಳಿಸಿದ್ದಾರೆ. ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೊದಲಿಗರಾಗಿದ್ದು, ಅವರು 619 ವಿಕೆಟ್ ಗಳಿಸಿದ್ದಾರೆ.
ಒಟ್ಟಾರೆಯಾಗಿ ಅತಿಹೆಚ್ಚು ವಿಕೆಟ್ ಪಡೆದವರಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800, ಶೇನ್ ವಾರ್ನ್ 708, ಜೇಮ್ಸ್ ಅಂಡರ್ಸನ್ 640 ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.