ಕೇರಳ ಎಕ್ಸ್ ಪ್ರೆಸ್ ಖ್ಯಾತಿಯ ಕ್ರಿಕೆಟಿಗ ಎಸ್. ಶ್ರೀಶಾಂತ್ ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಪೀಳಿಗೆಯ ಕ್ರಿಕೆಟಿಗರಿಗೆ. ನನ್ನ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನವನ್ನು ಕೊನೆಗೊಳಿಸಲು ನಾನು ಈ ನಿರ್ಧಾರ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ನಿರ್ಧಾರವು ನನ್ನದು, ಇದು ನನಗೆ ಸಂತೋಷವನ್ನು ತರುವುದಿಲ್ಲ ಎಂದು ನನಗೆ ತಿಳಿದಿದ್ದರೂ, ನನ್ನ ಜೀವನದಲ್ಲಿ ಈ ಸಮಯದಲ್ಲಿ ತೆಗೆದುಕೊಳ್ಳುವ ಸರಿಯಾದ ಮತ್ತು ಗೌರವಾನ್ವಿತ ಕ್ರಮವಾಗಿದೆ. ನಾನು ಪ್ರತಿ ಕ್ಷಣವನ್ನು ಪ್ರೀತಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಕಾರಣದಿಂದಾಗಿ ಕೆಲ ವರ್ಷ ಕ್ರಿಕೆಟ್ ನಿಂದ ದೂರವಿದ್ದ ಅವರು ಸಿನಿಮಾದಲ್ಲಿಯೂ ಅಭಿನಯಿಸಿದ್ದು. 39 ನೇ ವಯಸ್ಸಿನಲ್ಲಿ ರೆಡ್ ಬಾಲ್ ಕ್ರಿಕೆಟ್ಗೆ ಮರಳಲು ಸಿದ್ಧರಾಗಿದ್ದರು. ಮುಂಬರುವ ರಣಜಿ ಋತುವಿಗಾಗಿ ಕೇರಳ ಕ್ರಿಕೆಟ್ ಅಸೋಸಿಯೇಷನ್ 20 ಆಟಗಾರರ ತಂಡದಲ್ಲಿ ಶ್ರೀಶಾಂತ್ ಅವರನ್ನು ಆಯ್ಕೆ ಮಾಡಿದೆ. ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೆಗಾ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿಗೆ ಹಿರಿಯ ಕ್ರಿಕೆಟಿಗ ಕೂಡ ನೋಂದಾಯಿಸಿಕೊಂಡಿದ್ದರು.