ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳು ಶೀಘ್ರದಲ್ಲಿಯೇ ನೇರ ರೈಲು ಅಥವಾ ವಿಮಾನದ ಮೂಲಕ ಕೊಪ್ಪಳ ಜಿಲ್ಲೆಯ ರಾಮ ಭಕ್ತ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿಗೆ ಭೇಟಿ ನೀಡಬಹುದಾಗಿದೆ.
1500 ಕಿಲೋಮೀಟರ್ಗೂ ಅಧಿಕ ದೂರವಿರುವ ಈ ಎರಡೂ ಸ್ಥಳಗಳ ನಡುವೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲು ಹಾಗೂ ವಿಮಾನಸೇವೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿಧಾನ ಪರಿಷತ್ತಿಗೆ ತಿಳಿಸಿದ್ರು.
ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಜೊಲ್ಲೆ , ಮುಂದಿನ ದಿನಗಳಲ್ಲಿ ನಾವು ಅಯೋಧ್ಯೆಯಿಂದ ಅಂಜನಾದ್ರಿ ಬೆಟ್ಟಕ್ಕೆ ರೈಲು ಹಾಗೂ ವಿಮಾನ ಸೇವೆಗಳನ್ನು ಆರಂಭಿಸಲು ಯೋಜಿಸುತ್ತಿದ್ದೇವೆ. ಧಾರ್ಮಿಕ ದತ್ತಿ ಇಲಾಖೆಯು ಐತಿಹಾಸಿಕ ಅಂಜನಾದ್ರಿ ಬೆಟ್ಟದ ಬಳಿ ಸುಮಾರು 13 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದು ಇಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ಹೇಳಿದರು.
ನಾವು ವಿಶೇಷ ಪ್ಯಾಕೇಜ್ಗಳನ್ನು ಪರಿಚಯಿಸುವ ಬಗ್ಗೆಯೂ ಯೋಚಿಸುತ್ತಿದ್ದೇವೆ. ಈ ಸಂಬಂಧ ಈಗಾಗಲೇ ಮಾತುಕತೆ ನಡೆಯುತ್ತಿದೆ ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.