ನವದೆಹಲಿ: ಜಾತಿವಾದ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಗೆಲ್ಲಲಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಲಿದೆ. ಮೂರನೇ ಬಾರಿಗೆ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತೇವೆ. ಉತ್ತರಪ್ರದೇಶ ಫಲಿತಾಂಶವೇ ಇದಕ್ಕೆ ಸಾಕ್ಷಿಯಾಗಿದೆ. ಇಂದಿನ ಫಲಿತಾಂಶ 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಹೇಳಿದ್ದಾರೆ.
ನಾವು 2019 ರಲ್ಲಿ(ಕೇಂದ್ರದಲ್ಲಿ) ಸರ್ಕಾರ ರಚಿಸಿದಾಗ, 2017 ರ(ಯುಪಿಯಲ್ಲಿ) ಗೆಲುವಿನಿಂದಾಗಿ ಸಾಧ್ಯವಾಗಿದೆ ಎಂದು ‘ತಜ್ಞರು’ ಹೇಳಿದ್ದರು. 2022 ರ ಈ ಚುನಾವಣಾ ಫಲಿತಾಂಶವು 2024 ರ ರಾಷ್ಟ್ರೀಯ ಚುನಾವಣೆಗಳ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅದೇ ‘ತಜ್ಞರು’ ಹೇಳುತ್ತಾರೆಂಬ ನಂಬಿಕೆ ಇದೆ ಎಂದು ಮೋದಿ ಹೇಳಿದ್ದಾರೆ.