ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಪರಾಧ ತನಿಖಾ ವಿಭಾಗದ ಹಿರಿಯ ಗುಮಾಸ್ತ ಆರ್ಎಸ್ ವಾಘಮೋರೆ ಶುಕ್ರವಾರ ಮಹಾರಾಷ್ಟ್ರದ ಚತುರ್ಶೃಂಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ವಾಶಿಮ್ ಜಿಲ್ಲೆಯ ಸಿಐಡಿ ಕಚೇರಿಯಲ್ಲಿ ಫಿಂಗರ್ಪ್ರಿಂಟ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ಸೆಪ್ಟೆಂಬರ್ 22, 2017ರಂದು ಕ್ಯಾನ್ಸರ್ ನಿಂದ ಸಾವನ್ನಪ್ಪಿದರು. ನಂತರ, ಅವರ ಪತ್ನಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸಿದರು.
BIG NEWS: ನ್ಯಾಯಕ್ಕಾಗಿ ಹೋರಾಡಿದ ಬ್ಯಾಂಕ್ ಠೇವಣಿದಾರರ ವಿರುದ್ಧವೇ FIR ದಾಖಲು
ಪುಣೆಯಲ್ಲಿರುವ ರಾಜ್ಯ ಸಿಐಡಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದು, ತನ್ನ ಅರ್ಜಿಯೊಂದಿಗೆ ನಕಲಿ ಅಂಕಪಟ್ಟಿ ಮತ್ತು ಬಿಎ ಮೂರನೇ ವರ್ಷದ ಪ್ರಮಾಣಪತ್ರ ಸಲ್ಲಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ವಂಚನೆ ಬೆಳಕಿಗೆ ಬಂದ ನಂತರ ಸಿಐಡಿ ಅಧಿಕಾರಿಗಳು ಮಹಿಳೆ ವಿರುದ್ಧ ದೂರು ದಾಖಲಿಸಿ, ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 420, 465, 468, 471 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಮತ್ತು ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.