alex Certify ಮೋದಿ ಭೇಟಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ತಂಡ; ಚಿತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಭೇಟಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ತಂಡ; ಚಿತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ

ನಿರ್ಮಾಪಕ ಅಭಿಷೇಕ್ ಅಗರ್ವಾಲ್, ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಮತ್ತು ನಟಿ ಪಲ್ಲವಿ ಜೋಶಿ ಸೇರಿದಂತೆ ‘ಕಾಶ್ಮೀರ್ ಫೈಲ್ಸ್’ ತಂಡ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಮ್ಮ ಚಿತ್ರದ ಬಗ್ಗೆ ಮೆಚ್ಚುಗೆಯನ್ನು ಸ್ವೀಕರಿಸಿದೆ.

ಈ ಚಿತ್ರವು 1990 ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಕಥಾಹಂದ ಹೊಂದಿದೆ. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್ ಮತ್ತು ಪಲ್ಲವಿ ಜೋಶಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಅಭಿಷೇಕ್ ಅಗರ್ವಾಲ್ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಪ್ರಧಾನ ಮಂತ್ರಿಯೊಂದಿಗಿನ ಅವರ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಮೊದಲ ದಿನವೇ 3.55 ಕೋಟಿ ರೂ. ಗಳಿಸಿದೆ. ಹರಿಯಾಣ ಸರ್ಕಾರ ರಾಜ್ಯದಲ್ಲಿ ‘ಕಾಶ್ಮೀರ ಫೈಲ್ಸ್’ ತೆರಿಗೆ ಮುಕ್ತವಾಗಲಿದೆ ಎಂದು ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...