ಬೆಂಗಳೂರು: ಅವಧಿಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಹಾಗೂ ವಿಪಕ್ಷ ನಾಯಕರಲ್ಲಿ ಚರ್ಚೆಯಾಗುತ್ತಿದೆ ಹೊರತು ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಯೇ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ. ಪಕ್ಷದಲ್ಲಿ ಯಾವುದೇ ಹಂತದಲ್ಲಿಯೂ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ
ದೆಹಲಿ ಪ್ರವಾಸದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿಲ್ಲ, ಅವರು ಕರೆದಾಗ ದೆಹಲಿಗೆ ಹೋಗುತ್ತೇನೆ. ಇನ್ನು ಸಚಿವ ಸಂಪುಟ ಪುನಾರಚನೆ ವಿಚಾರವಾಗಿಯೂ ಹೈಕಮಾಂಡ್ ಯಾವುದೇ ಸೂಚನೆ ನೀಡಿಲ್ಲ. ವರಿಷ್ಠರು ಯಾವಾಗ ಹೇಳ್ತಾರೋ ಆಗ ಸಂಪುಟ ಪುನಾರಚನೆ ಮಾಡಲಾಗುವುದು ಎಂದರು.
ಈ ತಿಂಗಳಾಂತ್ಯಕ್ಕೆ ಮಾ.30, 31ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು.