ಮೈಸೂರು: ದಿ. ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುವುದು.
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಮಾರ್ಚ್ 22 ರಂದು ನಡೆಯುವ ಮೈಸೂರು ವಿವಿ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎನ್ನಲಾಗಿದೆ.
ವರನಟ ಡಾ. ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿದೆ. ಇದೀಗ ಪುನೀತ್ ರಾಜಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.