alex Certify ಬಿಜೆಪಿ ಐಟಿ ಸೆಲ್​ ಮುಖ್ಯಸ್ಥನ ಸಾವು ಪ್ರಕರಣದಲ್ಲಿ ಪೊಲೀಸರಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಐಟಿ ಸೆಲ್​ ಮುಖ್ಯಸ್ಥನ ಸಾವು ಪ್ರಕರಣದಲ್ಲಿ ಪೊಲೀಸರಿಂದ ಮಹತ್ವದ ಮಾಹಿತಿ

ಅಂಬಲಾದ ಬಿಜೆಪಿ ಐಟಿ ಸೆಲ್​ ಇನ್​ಚಾರ್ಜ್​ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಒಂದು ದಿನದ ಬಳಿಕ ಪೊಲೀಸರು ಫೌಲ್​ ಪ್ಲೇ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಬಿಜೆಪಿ ನಾಯಕ ವಿಕ್ರಮ್​ಜೀತ್​ ಸಿಂಗ್​ ನಾಗಿ (43) ಭಾನುವಾರದಂದು ಅಮೃತಸರದ ಕ್ರಾಸ್​ ರಸ್ತೆ 1ರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಪವಿಭಾಗೀಯ ಸಿವಿಲ್​ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂಬ ಅಂಬಾಲಾ ಕ್ಯಾಂಟ್​ ಠಾಣೆಯ ಇನ್​ಸ್ಪೆಕ್ಟರ್​ ನರೇಶ್​ ಕುಮಾರ್​ ತಿಳಿಸಿದ್ದಾರೆ.

ಔಪಚಾರಿಕವಾಗಿ ವರದಿಯನ್ನು ನಿರೀಕ್ಷಿಸಲಾಗಿದೆಯಾದರೂ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇವರದ್ದು ಸಹಜ ಸಾವು ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಶವ ಪರೀಕ್ಷೆ ನಡೆಸಿದ ಫೋರೆನ್ಸಿಕ್​ ತಜ್ಞ ಡಾ. ಮುನೀಶ್​ ಸಿಂಗ್ಲಾ, ವಿಜ್ರಮ್​ಜೀತ್​ ಸಿಂಗ್​ ನಾಗಿ ಅತಿಯಾಗಿ ಮದ್ಯ ಸೇವನೆಯಿಂದ ಅವರು ಗಂಭೀರವಾದ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಅಂತಿಮ ಹಂತದಲ್ಲಿದ್ದ ನಾಗಿ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ಅವರ ದೇಹ ನೀಲಿ ಬಣ್ಣಕ್ಕೆ ತಿರುಗಿತ್ತು. ಅವರು ವಿಷ ಸೇವಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...