ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಖಾಸಗಿ ಬಸ್ ಪಲ್ಟಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಭೀಕರ ಬಸ್ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿ ಆಕ್ರಂದನ ಮುಗಿಲುಮುಟ್ಟಿದೆ.
ನಿನ್ನೆ ಬೆಳಿಗ್ಗೆ ಪಳವಳ್ಳಿ ಕಟ್ಟೆಯಲ್ಲಿ ಸಂಭವಿಸಿದ್ದ ಬಸ್ ಅಪಘಾತದಲ್ಲಿ ಅಕ್ಕ ಅಮೂಲ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಹರ್ಷಿತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡ ರಾತ್ರಿ ಹರ್ಷಿತಾ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.
ಇಬ್ಬರೂ ಕಾಲೇಜಿಗೆ ಹೋಗಲೆಂದು ಬಸ್ ನಲ್ಲಿ ಬರುತ್ತಿದ್ದರು. ಈ ವೇಳೆ ಪಳವಳ್ಳಿ ಕಟ್ಟೆ ಬಳಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಇಂದು ಇಬ್ಬರು ಸಹೋದರಿಯರ ಅಂತ್ಯಕ್ರಿಯೆ ತುಮಕೂರಿನ ಪಾವಗಡದ ಪೋತಗಾನಹಳ್ಳಿಯಲ್ಲಿ ನಡೆಯಲಿದೆ.