ಮೈಸೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸರ್ಕಾರ ಸೇರಿದಂತೆ ಎಲ್ಲರೂ ಪಾಲಿಸಲೇಬೇಕು. ಕರ್ತವ್ಯ ಪಾಲಿಸದೇ ಛೀಮಾರಿ ಹಾಕಿಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶವಿಲ್ಲ. ಹಿಜಾಬ್ ಗೆ ಪಟ್ಟು ಹಿಡಿದು ಪರೀಕ್ಷೆಗಳಿಗೆ ಗೈರಾದರೆ ಮರು ಪರೀಕ್ಷೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.
ಸೆಕ್ಸ್ ವಿಡಿಯೋದಲ್ಲಿರುವ ಯುವತಿಗೆ ಹುಡುಕಾಟ: ಶಿರಸ್ತೆದಾರ್ ಗೆ ಬ್ಲಾಕ್ ಮೇಲ್ ಮಾಡಿದ್ದ ಮೂವರು ಅರೆಸ್ಟ್
ಈಗಾಗಲೇ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ವಾಪಸ್ ಮನೆಗೆ ತೆರಳಿದ್ದಾರೆ. ಮತ್ತೆ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ರೀತಿ ಮುಂದುವರೆದರೆ ಮರು ಪರೀಕ್ಷೆ ಇರುವುದಿಲ್ಲ ಎಂದು ಎಚ್ಚರಿಸಿದರು.
ಇದೇ ವೇಳೆ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪವೇ ಇಲ್ಲ ಎಂದು ತಿಳಿಸಿದ್ದಾರೆ.