alex Certify ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ.

ಮಾರ್ಚ್ 22 ರಿಂದ 24 ರವರೆಗೆ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಮಾ. 23 ರಂದು ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಮಾರ್ಚ್ 24 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ನಿನ್ನೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...