ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಏ.16ಕ್ಕೆ ಸಚಿವ ವಿ.ಸೋಮಣ್ಣ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ಸೂಚಿಸಿದೆ. 2013ರಲ್ಲಿ ಸೋಮಣ್ಣ ವಿರುದ್ಧ ರಾಮಕೃಷ್ಣ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು. ಆದರೆ ಪೊಲೀಸರು, ವಿ. ಸೋಮಣ್ಣ ಆದಾಯ ಮೀರಿ ಆಸ್ತಿಗಳಿಕೆ ಮಾಡಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು.
ಜೈಲಿನಲ್ಲಿ ಅತಿಕ್ ಅಹ್ಮದ್ ಹೋಳಿ ಆಡುತ್ತಿರುವ ಫೋಟೋ ವೈರಲ್
ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿರುವ ಕೋರ್ಟ್, ಶಾಸಕರಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿ ಬಗ್ಗೆ ಪೊಲೀಸರು ಸೂಕ್ತ ವಿವರಣೆ ನೀಡಿಲ್ಲ. ಹೀಗಾಗಿ ಅಸಮರ್ಪಕ ತನಿಖೆ ಎಂದು ಅಭಿಪ್ರಾಯಪಟ್ಟಿತ್ತು.
ಇದೀಗ ವಿ.ಸೋಮಣ್ಣ ವಿರುದ್ಧ ಸಮನ್ಸ್ ಜಾರಿಗೆ ನ್ಯಾ.ಬಿ.ಜಯಂತ್ ಕುಮಾರ್ ಆದೇಶ ನೀಡಿದ್ದಾರೆ.