ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಬುಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಟಿಎಂಸಿ ನಾಯಕನ ಹತ್ಯೆ ಬೆನ್ನಲ್ಲೇ ಉದ್ವಿಗ್ನಗೊಂಡ ಗುಂಪು ಸಿಕ್ಕ ಸಿಕ್ಕ ಕಡೆ ಬೆಂಕಿ ಹಚ್ಚುತ್ತಿದ್ದು, 8 ಜನರು ಸಜೀವ ದಹನಗೊಂಡಿದ್ದಾರೆ.
ಬರೋಸಾಲ್ ಗ್ರಾಮ ಪಂಚಾಯತ್ ಉಪ ಪ್ರಧಾನ್ ಭಡು ಶೇಖ್ ಎಂಬುವವರು ಹತ್ಯೆಯಾಗಿದ್ದರು. ಇದರ ಬೆನ್ನಲ್ಲೇ ಭಡು ಶೇಖ್ ಬೆಂಬಲಿಗರು ಹಿಂಸಾಚಾರ ಆರಂಭಿಸಿದ್ದಾರೆ. ಆಕ್ರೋಶಿತರ ಗುಂಪು ಮನೆಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚುತ್ತಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಗೋಮಾಂಸ ಸಾಗಿಸುತ್ತಿದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು..!
ರಾಷ್ಟ್ರೀಯ ಹೆದ್ದಾರಿ 60ರಲ್ಲಿ ನಿಂತಿದ್ದ ಭಡು ಶೇಖ್ ಅವರನ್ನು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.