ನಿಮ್ಮ ಸಮಯ ಮುಗೀತು? ರಾಜೀನಾಮೆ ಕೊಡಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನಾ ಮುಖ್ಯಸ್ಥ ಬಜ್ವಾ ಹೇಳಿದ್ದಾರೆ.
ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ನೇತೃತ್ವದ ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ಎರಡು ದಿನಗಳ ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ಸಭೆಯ ಅಂತ್ಯದ ನಂತರ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನಿ ಸೇನಾ ಮುಖ್ಯಸ್ಥ ಮತ್ತು ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್(ISI) ಮುಖ್ಯಸ್ಥ ನದೀಮ್ ಅಂಜುಮ್ ಅವರು ಇಮ್ರಾನ್ ಖಾನ್ ಅವರನ್ನು ಭೇಟಿಯಾದ ನಂತರ ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಎಲ್ಲಾ ನಾಲ್ಕು ಸೇನಾ ನಾಯಕರು ಕ್ರಿಕೆಟಿಗ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ಗೆ ತಪ್ಪಿಸಿಕೊಳ್ಳುವ ಯಾವುದೇ ಮಾರ್ಗವನ್ನು ನೀಡದಿರಲು ನಿರ್ಧರಿಸಿದ್ದಾರೆ.
ಅವಿಶ್ವಾಸ ಮತದಲ್ಲಿ ಸೋಲುವ ಭೀತಿಯಿಂದ ಇಮ್ರಾನ್ ಖಾನ್ ಸುಪ್ರೀಂ ಕೋರ್ಟ್ ಬಾಗಿಲು ತಟ್ಟಿದ್ದಾರೆ. ಅವಿಶ್ವಾಸ ಮತದಲ್ಲಿ ತಮ್ಮ ವಿರುದ್ಧ ಮತ ಚಲಾಯಿಸುವ ಸಾಧ್ಯತೆಯಿರುವ ಪಕ್ಷಾಂತರಿಗಳ ವಿರುದ್ಧ ಕ್ರಮಕೈಗೊಳ್ಳಲು ಕಾನೂನು ಮಾರ್ಗವನ್ನು ತೆಗೆದುಕೊಂಡಿದ್ದಾರೆ. ತೆಹ್ರೀಕ್-ಎ-ಇನ್ಸಾಫ್ ಸರ್ಕಾರ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇರುವ ಭಿನ್ನಮತೀಯ ಶಾಸಕರನ್ನು ಅನರ್ಹಗೊಳಿಸಬಹುದೇ ಎಂದು ಸ್ಪಷ್ಟಪಡಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.