ಚಾಮರಾಜನಗರ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯೋರ್ವಳು ಕ್ಷುಲ್ಲಕ ಕಾರಣ ನೀಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
16 ವರ್ಷದ ಮಮತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೂರು ದಿನಗಳಿಂದ ಮನಸ್ಸಿಗೆ ನೆಮ್ಮದಿಯಿಲ್ಲ. ಹಾಗಾಗಿ ಸಾಯಲು ನಿಶ್ಚಯಿಸಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ಅಪ್ಪ, ಅಮ್ಮ, ದೊಡ್ಡಪ್ಪ, ದೊಡ್ಡಮ್ಮ, ಅಜ್ಜಿ ಎಲ್ಲರಿಗೂ ನನ್ನ ಕೊನೆಯ ವಂದನೆಗಳು ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲ; ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ
ಮನೆಯಲ್ಲಿಯೇ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮಮತಾ. ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.