ನವದೆಹಲಿ: ಹಿಜಾಬ್ ತೀರ್ಪು ಪ್ರಶ್ನಿಸಿ ಸುಪ್ರೀಂ ನಲ್ಲಿ ಮೇಲ್ಮನವಿ ಸಲ್ಲಿಸಿರುವ ಅರ್ಜಿದಾರರು ಇದೀಗ ತುರ್ತು ವಿಚಾರಣೆಗೆ ಮನವಿ ಮಾಡಿದ್ದು, ಆದರೆ ಸಿಜೆಐ ಎನ್.ವಿ ರಮಣ, ಅರ್ಜಿ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನಿರಾಕರಿಸಿದ್ದಾರೆ.
ವಿದ್ಯಾರ್ಥಿನಿ ಐಶಾತ್ ಶಿಫಾ, ಹಿಜಾಬ್ ಕುರಿತು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಗೆ ಮನವಿ ಮಾಡಿದ್ದಳು. ಮಾ.28 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ತುರ್ತು ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದಳು.
ಚಲಿಸುತ್ತಿದ್ದ ಬಸ್ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್ ಬಳಿಕ ಖಾಕಿ ಅಲರ್ಟ್
ಅಲ್ಲದೇ, ಕರ್ನಾಟಕ ಹೈಕೋರ್ಟ್ ಹಿಜಾಬ್ ತೀರ್ಪು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿನಿ ಪರ ವಕೀಲ ದೇವದತ್ತ ಕಾಮತ್ ವಿಚಾರಣೆ ನಡೆಸುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಿಜೆಐ ಹಿಜಾಬ್ ಗೂ ಪರೀಕ್ಷೆಗಳಿಗೂ ಯಾವುದೇ ಸಂಬಂಧವಿಲ್ಲ, ಈ ವಿಚಾರವನ್ನು ಅತಿರಂಜಿತಗೊಳಿಸುವ ಅಗತ್ಯವಿಲ್ಲ. ಅರ್ಜಿಯ ತುರ್ತು ವಿಚಾರಣೆ ನಡೆಸಲಾಗದು ಎಂದು ನಿರಾಕರಿಸಿದ್ದಾರೆ.