ಲಖ್ನೋ: ಬಿಜೆಪಿ ಶಾಸಕಾಂಗ ನಾಯಕರಾಗಿ ಯೋಗಿ ಆದಿತ್ಯನಾಥ್ ಅವರನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಲಖ್ನೋದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆದಿದೆ. ಸಭೆಯಲ್ಲಿ ಯೋಗಿ ಅವರನ್ನು ಶಾಸಕಾಂಗ ನಾಯಕರಾಗಿ ಆಯ್ಕೆ ಮಾಡಲಾಗಿದೆ. ನಾಳೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಎರಡನೇ ಅವಧಿಗೆ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಪ್ರಮಾಣವಚನ ಸ್ವೀಕರಿಸುವರು. ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮೊದಲಾದವರು ಭಾಗವಹಿಸಲಿದ್ದಾರೆ.