ಮಂಗಳೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವ ವಿದ್ಯಾಲಯ ತನ್ನ ವ್ಯಾಪ್ತಿಗೆ ಬರುವ 212 ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
ಹಿಜಾಬ್ ತೀರ್ಪು ವಿರೋಧಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಹಿಜಾಬ್ ಧಾರಿಗಳು ಹಿಜಾಬ್ ಚಳುವಳಿ ಎಂಬ ಹೆಸರಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಕೂಡ ಭಾಗಿಯಾಗಿದ್ದು, ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟಾನಾಕರ ನಡುವೆ ವಾಗ್ವಾದ ನಡೆದಿದೆ. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿದ್ದಾರೆ. ಒಟ್ಟಾರೆ ಕರಾವಳಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಬಿಟ್ಟು ಮತ್ತೆ ಹಿಜಾಬ್ ವಿವಾದತ್ತ ಗಮನಹರಿಸಿದ್ದು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.