alex Certify BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 4,100 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,20,855 ಕ್ಕೆ ಏರಿಕೆಯಾಗಿದೆ. ಆದರೆ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಲು ಕೆಲ ರಾಜ್ಯಗಳಿಂದ‌ ಈ ಹಿಂದಿನ ಸಾವುಗಳ ಅಧಿಕೃತ ಅಂಕಿ ಸಂಖ್ಯೆಗಳು ಈಗ ಸೇರ್ಪಡೆಯಾಗಿರುವುದು ಕಾರಣವೆನ್ನಲಾಗಿದೆ.

ಇನ್ನು ದೇಶದಲ್ಲಿ 16,741 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,349 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,80,436 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 29,07,479 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,82,87,68,476 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,58,489 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...