ಹುಬ್ಬಳ್ಳಿ: ಏಪ್ರಿಲ್ 6 ರಂದು ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದಾರೆ.
ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.