alex Certify ತರಗತಿಯಲ್ಲಿ ಹಿಜಾಬ್ ಧರಿಸಿ ನಮಾಜ್; ತನಿಖೆಗೆ ಸಮಿತಿ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತರಗತಿಯಲ್ಲಿ ಹಿಜಾಬ್ ಧರಿಸಿ ನಮಾಜ್; ತನಿಖೆಗೆ ಸಮಿತಿ ರಚನೆ

ಹಿಜಾಬ್ ಪ್ರಕರಣ ದೇಶಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯಳೊಬ್ಬರು ಹಿಜಾಬ್ ಧರಿಸಿ ತರಗತಿಯೊಳಗೆ ನಮಾಜ್ ಮಾಡಿದ ಪ್ರಕರಣ ಮಧ್ಯಪ್ರದೇಶದ ಡಾ. ಹರಿಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಇದೀಗ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಬಲಪಂಥೀಯ ಸಂಘಟನೆಯು, ವಿದ್ಯಾರ್ಥಿನಿ ನಮಾಜ್ ಮಾಡುವ ವಿಡಿಯೋವನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆ ಮಾಡಿದೆ.

BIG BREAKING: ದೇಶದ 80 ಕೋಟಿ ಜನತೆಗೆ ಗುಡ್ ನ್ಯೂಸ್, ಉಚಿತ ಪಡಿತರದ ‘ಗರೀಬ್ ಕಲ್ಯಾಣ್ ಅನ್ನ ಯೋಜನೆ’ 6 ತಿಂಗಳು ವಿಸ್ತರಣೆ

ಹಿಂದೂ ಜಾಗರಣಾ ಮಂಚ್ ತನಿಖೆ ನಡೆಸುವಂತೆ ಆಗ್ರಹಿಸಿದೆ. ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ್ ವಿಡಿಯೋ ಸಹಿತ ದೂರು ಸಲ್ಲಿಕೆಯಾಗಿದೆ ಎಂಬುದನ್ನು ಖಾತ್ರಿಪಡಿಸಿದ್ದಾರೆ.

ತನಿಖೆ ನಡೆಸಿ ವರದಿ ನೀಡಲು ಐದು ಸದಸ್ಯರ ಸಮಿತಿ ರಚಿಸಲಾಗಿದೆ. ವರದಿ ಕೊಡಲು‌ ಮೂರು ದಿನ‌ ಕಾಲಾವಕಾಶ ನೀಡಲಾಗಿದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕುಲಸಚಿವರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಅಧಿಕಾರಿಯು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿ, ವಿಶ್ವವಿದ್ಯಾಲಯದಲ್ಲಿ ಯಾವುದೇ ನಿರ್ದಿಷ್ಟ ಡ್ರೆಸ್ ಕೋಡ್ ಇಲ್ಲ. ಆದರೆ ಸೂಕ್ತ ಧಿರಿಸಿನಲ್ಲಿ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಹಿಂದು ಜಾಗರಣಾ ಮಂಚ್ ಪ್ರಕಾರ, ಶೈಕ್ಷಣಿಕ ಸಂಸ್ಥೆಯೊಳಗೆ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ವಿದ್ಯಾರ್ಥಿನಿ ನಮಾಜ್ ಮಾಡುವುದು ಕಂಡುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...