ಪಣಜಿ: ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಪಣಜಿಯ ಶಾಮ್ ಪ್ರಸಾದ್ ಮುಖರ್ಜಿ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮೋದ್ ಸಾವಂತ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2017 ರಲ್ಲಿ ಮನೋಹರ್ ಪರಿಕ್ಕರ್ ಸರ್ಕಾರದಲ್ಲಿ ವಿಧಾನಸಭೆ ಸ್ಪೀಕರ್ ಆಗಿ ಕೆಲಸ ಮಾಡಿದ್ದ ಪ್ರಮೋದ್ ಸಾವಂತ್ ಅವರು, ಮನೋಹರ್ ಪರಿಕ್ಕರ್ ನಿಧನದ ನಂತರ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದರು.