alex Certify ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಲು ರಮಾನಾಥ್ ರೈ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಲು ರಮಾನಾಥ್ ರೈ ಮನವಿ

ಬೆಂಗಳೂರು: ಬಂಟರು ಅಂದ್ರೆ ಶ್ರೀಮಂತರಲ್ಲ. ಬಂಟ ಸಮುದಾಯದಲ್ಲೂ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಮನವಿ ಮಾಡಿದ್ದಾರೆ.

ಬೆಂಗಳೂರು ಬಂಟರ ಸಂಘದಿಂದ ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಣಿ ರಮಾನಾಥ್ ರೈ ಅವರಿಗೆ  ದಿ. ಡಾ. ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯ್ತು.

ಈ ಸಂದರ್ಭದಲ್ಲಿ ಮಾತನಾಡಿದ ರಮಾನಾಥ್ ರೈ, ಬಂಟ ಸಮುದಾಯ ಎಲ್ಲಾ ಕ್ಷೇತ್ರದಲ್ಲೂ ಗುರುತಿಸಿಕೊಂಡಿದೆ. ಜೊತೆಗೆ ಎಲ್ಲಾ ಸಮಾಜದ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಆದ್ರೂ ಕೂಡ ಬಂಟ ಸಮುದಾಯದಲ್ಲೂ ಸಾಕಷ್ಟು ಮಂದಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿವರಿದ್ದಾರೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆದ್ರಿಂದ ಬೆಂಗಳೂರು ಬಂಟರ ಸಂಘದ ಮೂಲಕ ಬಂಟ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮನವಿ ಮಾಡಿಕೊಂಡ್ರು.

ಕರ್ನಾಟಕ ರಾಜ್ಯದಲ್ಲಿ ಬಂಟ ಸಮಾಜ 3- ಬಿ ಪ್ರವರ್ಗದಲ್ಲಿದೆ. ಆದ್ರೆ ಕೇಂದ್ರದಲ್ಲಿ ಸಾಮಾನ್ಯ ವರ್ಗದಲ್ಲಿದೆ. ಹೀಗಾಗಿ ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು. ಸರ್ಕಾರದ ಸೌಲಭ್ಯಗಳು ಬಂಟ ಸಮುದಾಯಕ್ಕೂ ಸಿಗಬೇಕು ಎಂಬುದು ಈ ಬೇಡಿಕೆಯ ಉದ್ದೇಶವಾಗಿದೆ.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣ ಸ್ವಾಮಿ ಅವರು, ಬೆಂಗಳೂರು ಬಂಟರ ಸಂಘದ ಮನವಿಗೆ ಸಕಾರತ್ಮಕವಾಗಿ ಸ್ಪಂದಿಸಿ, ಬೆಂಗಳೂರು ಬಂಟರ ಸಂಘದ ಬೇಡಿಕೆಯನ್ನು ಸೂಕ್ತ ರೀತಿಯಲ್ಲಿ ಈಡೇರಿಸುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರ ಜೊತೆ ಭೇಟಿ ಮಾಡಿ ಚರ್ಚೆ ಮಾಡೋಣ. ನಿಮ್ಮ ಜೊತೆ ನಾನು ಇರುತ್ತೇನೆ. ಬಂಟ ಸಮುದಾಯದ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಇದೇ ವೇಳೆ ಉದ್ಯಮಿ ಸರ್ವೋತ್ತಮ ಶೆಟ್ಟಿ ಅವರಿಗೆ ದಿ. ಡಾ.ಡಿ.ಕೆ. ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನುಳಿದಂತೆ ಬೆಂಗಳೂರು ಬಂಟರ ಸಂಘದ ವತಿಯಿಂದ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ,  ಕ್ರೀಡಾ ಸಾಧನಾ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡಲಾಯಿತ್ತು. ಸುಮಾರು 170 ಮಂದಿಗೆ ಪ್ರಶಸ್ತಿ ನೀಡಲಾಯ್ತು.

ಕಾರ್ಯಕ್ರಮದಲ್ಲಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಯ ಅಧ್ಯಕ್ಷ ಕೆ.ಸಿ. ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಂ. ಮಧುಕರ ಶೆಟ್ಟಿ, ಕ್ರೀಡಾ ಸಮಿತಿಯ ಚೇರ್ ಪರ್ಸನ್ ರಾಧಾಕೃಷ್ಣ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಚೇರ್ ಪರ್ಸನ್ ವಿಜಯ್ ಜೆ. ಶೆಟ್ಟಿ ಹಾಲಾಡಿ ಮೊದಲಾದವರು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...