
ಬೆಂಗಳೂರು-ಪುಣೆ ನಡುವೆ ಹೊಸ ಹೆದ್ದಾರಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಹೆದ್ದಾರಿ, ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಪ್ರಸ್ತುತ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 775 ಕಿಲೋಮೀಟರ್ ಉದ್ದವಿದ್ದು, ಈ ರಸ್ತೆ ಮಳೆಗಾಲದಲ್ಲಿ ಅಲ್ಲಲ್ಲಿ ಮುಳುಗಡೆಯಾಗಿ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೊಸ ಹೆದ್ದಾರಿಯನ್ನು ಮುಳುಗಡೆಯಾಗದಂತೆ ಮಾಡಲಿದ್ದು, 76 ಲೋಮೀಟರ್ ಅಂತರ ಕಡಿಮೆಯಾಗಲಿದೆ. ಅಲ್ಲದೆ ಪ್ರಸ್ತುತ ಇರುವ ಹೆದ್ದಾರಿ ಮೇಲಿನ ಒತ್ತಡವೂ ಕಡಿಮೆಯಾಗಲಿದೆ.
ಈಗಿನ ಹೆದ್ದಾರಿ ಪುಣೆ, ಕೊಲ್ಲಾಪುರ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ಸಂಪರ್ಕಿಸುತ್ತದೆ.
ಹೊಸ ಹೆದ್ದಾರಿ ಸತಾರ, ಸಾಂಗ್ಲಿ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಮೂಲಕ ಹಾದು ಬೆಂಗಳೂರು ತಲುಪಲಿದೆ.