ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಅಧಿಕಾರ ವಹಿಸಿಕೊಂಡಿದ್ದಾರೆ. ನನಗೆ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ ಗೆ ಧನ್ಯವಾದಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಯಾರು ಭಾಗಿಯಾಗಿರಲಿಲ್ಲ. ಆದರೆ, ಈಗ ನಮಗೆ ದೇಶ ಭಕ್ತಿ ಬಗ್ಗೆ ಹೇಳಿಕೊಡಲು ಬರುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕೊರೋನಾ ಸಂದರ್ಭದಲ್ಲಿ ಚಿಕಿತ್ಸೆ ಸಿಗದೆ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಕೋವಿಡ್ ನಿರ್ವಹಣೆ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಿದೆ. ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲು ಸರ್ಕಾರ ಯತ್ನಿಸುತ್ತಿದೆ. ಜನವಿರೋಧಿಯಾಗಿರುವ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕು. 150 ಸೀಟು ಗೆದ್ದು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.