ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಸುಲ್ತಾನ್ ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಹತ್ವದ ನಿರ್ಧಾರವೊಂದನ್ನು ಪಠ್ಯ ಪರಿಷ್ಕರಣೆ ಸಮಿತಿ ತೆಗೆದುಕೊಂಡಿದೆ.
ಶಾಲಾ ಪಠ್ಯಪುಸ್ತಕಗಳಲ್ಲಿ ‘ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಎಂಬ ಉಲ್ಲೇಖವಿದ್ದು, ಆದರೆ ಈ ಬಿರುದು ಕೊಟ್ಟಿದ್ದು ಯಾರು ? ಯಾವ ಸಂದರ್ಭದಲ್ಲಿ ನೀಡಿದ್ದರು ಎಂಬ ಕುರಿತು ಎಲ್ಲಿಯೂ ದಾಖಲೆಗಳಿಲ್ಲ. ಹೀಗಾಗಿ ‘ಮೈಸೂರು ಹುಲಿ’ ಬಿರುದನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಿಳಿಸಿದ್ದಾರೆ.
ಜೊತೆಗೆ ಇನ್ನೂ ಹತ್ತು ಹಲವು ಅಂಶಗಳನ್ನು ಒಳಗೊಂಡ ವರದಿಯನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಾಜ್ಯ ಸರ್ಕಾರಕ್ಕೆ ನೀಡಿದ್ದು, ಇವುಗಳನ್ನು ಪರಿಶೀಲನೆ ನಡೆಸಿದ ನಂತರ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.