ಶ್ರೀನಗರ: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಇಂದು ಬೆಳಿಗ್ಗೆ 7:29 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರವು ಲೇಹ್ ನ ಅಲ್ಚಿಯಿಂದ 186 ಕಿಮೀ ಉತ್ತರದಲ್ಲಿ ಭೂಕಂಪ ಸಂಭವಿಸಿದೆ ಎಂದು ಹೇಳಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.