ಬೆಂಗಳೂರು: ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಜಯನಗರ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ದೆಹಲಿ ಮೂಲದ ರಜತ್, ಶಿವರಾಣಾ, ದೇವ್ ಸರೋಯಿ, ಯೋಗೇಶ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 28 ರಂದು ರಜತ್ ರೆಸ್ಟೋರೆಂಟ್ ಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದ. ನಂತರ ರೂಮ್ ಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೆಂಗಳೂರಿನಲ್ಲಿ ಯುವತಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ.
ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳು ರಾಷ್ಟ್ರಮಟ್ಟದ ಸ್ವಿಮ್ಮರ್ ಗಳಾಗಿದ್ದಾರೆ. ಅಭ್ಯಾಸಕ್ಕೆಂದು ಬಂದಿದ್ದ ಆರೋಪಿಗಳು ಬೆಂಗಳೂರಿನಲ್ಲಿ ವಾಸವಾಗಿದ್ದರು.