ಗದಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹಿನ್ನಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಗದಗದ ಸಿ.ಎಸ್. ಪಾಟೀಲ್ ಬಾಲಕರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರ ಮತ್ತು ಬಾಲಕಿಯರ ಹೈಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಪರೀಕ್ಷೆಗೆ ಹಾಜರಾಗಿ ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಲಕರ ಪ್ರೌಢಶಾಲೆಯ ಮುಖ್ಯ ಅಧೀಕ್ಷಕ ಕೆ.ಬಿ. ಭಜಂತ್ರಿ, ಬಾಲಕಿಯರ ಪ್ರೌಢಶಾಲೆಯ ಮುಖ್ಯ ಅಧೀಕ್ಷಕ ಹೊನಗುಂಡಿ ಅವರನ್ನು ಅಮಾನತು ಮಾಡಿ ಗದಗ ಡಿಡಿಪಿಐ ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.