ಬೆಂಗಳೂರು: ಏಕಗವಾಕ್ಷಿ ಮೂಲಕ ಪದವಿ ಕಾಲೇಜು ಪ್ರವೇಶಕ್ಕೆ ಸಿಯುಇಟಿ ನಡೆಸಲಾಗುವುದು. ಯಜಿಸಿ ಏಕಗವಾಕ್ಷಿ ಯೋಜನೆ ಮೂಲಕ ಪದವಿ ಕೋರ್ಸುಗಳಿಗೆ ಪ್ರವೇಶ ಕಲ್ಪಿಸಲು ಮುಂದಾಗಿದೆ. 2022 -23 ನೇ ಸಾಲಿನಿಂದ ಎಲ್ಲಾ ಕೇಂದ್ರೀಯ ವಿಶ್ವ ವಿದ್ಯಾಲಯಗಳಲ್ಲಿ ಸಿಯುಇಟಿ ಪ್ರವೇಶ ಪರೀಕ್ಷೆ ನಡೆಸಲು ಕ್ರಮ ಕೈಗೊಂಡಿದೆ. ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸಮಾನ ಪ್ರವೇಶವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ.
ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳು, ಡೀಮ್ಡ್ ವಿವಿ, ಖಾಸಗಿ ವಿವಿ ಮತ್ತು ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕಾಮನ್ ಯೂನಿವರ್ಸಿಟಿ ಎಂಟ್ರೆನ್ಸ್ ಟೆಸ್ಟ್(CUET) ಮೂಲಕ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ.
2022 -23 ನೇ ಸಾಲಿನಿಂದ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಈ ಮಾದರಿಯನ್ನು ಅನುಸರಿಸುವಂತೆ ಯುಜಿಸಿ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಪರಿಶೀಲನೆ ನಡೆಸಿದೆ ಎಂದು ಹೇಳಲಾಗಿದೆ.