ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣದ ಸಮಯವನ್ನು ಕೇವಲ 75 ನಿಮಿಷಗಳಿಗೆ ಕಡಿಮೆ ಮಾಡಲಿರುವ ಹೆದ್ದಾರಿ ಅಕ್ಟೋಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕರ್ನಾಟಕದಲ್ಲಿ NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 117 ಕಿಮೀ ಉದ್ದದ ವಿಸ್ತರಣೆಯು ಅಕ್ಟೋಬರ್ 2022 ರಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.
ಪ್ರಸ್ತುತ, ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಲು ಸುಮಾರು 3 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ಇದು ಎರಡು ಪ್ರಮುಖ ನಗರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಪ್ರವಾಸೋದ್ಯಮ, ಪ್ರದೇಶದ ಆರ್ಥಿಕತೆಗೆ ಅನುಕೂಲವಾಗಲಿದೆ. ರಾಷ್ಟ್ರೀಯ ಹೆದ್ದಾರಿ-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗವನ್ನು 8,350 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗವು ಕರ್ನಾಟಕ ರಾಜ್ಯದಲ್ಲಿ 10-ಲೇನ್ ಹೊಂದಿದ್ದು, 117 ಕಿಮೀ ಉದ್ದವಾಗಿದೆ. ಇದನ್ನು 8,350 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನಿರ್ಮಾಣ ಕಾರ್ಯ ಮುಕ್ತಾಯ ಹಂತದಲ್ಲಿದ್ದು, 2022ರ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಗಡ್ಕರಿ ಹೇಳಿದರು.
ಈ ಅತ್ಯಾಧುನಿಕ ಯೋಜನೆಯು 8 ಕಿಲೋಮೀಟರ್ ಉದ್ದದ ಎಲಿವೇಟೆಡ್ ಕಾರಿಡಾರ್, 9 ಪ್ರಮುಖ ಸೇತುವೆಗಳು, 42 ಸಣ್ಣ ಸೇತುವೆಗಳು, 64 ಅಂಡರ್ ಪಾಸ್ ಗಳು, 11 ಮೇಲ್ಸೇತುವೆಗಳು, ನಾಲ್ಕು ROB ಗಳು(ರೋಡ್ ಓವರ್ ಬ್ರಿಡ್ಜ್) ಮತ್ತು ಐದು ಬೈಪಾಸ್‌ಗಳಂತಹ ಬಹು ರಚನೆಗಳನ್ನು ಹೊಂದಿದೆ, ಇದು ಸಂಚಾರ ದಟ್ಟಣೆ, ಮಾಲಿನ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.