ಬೆಂಗಳೂರು: ಬೆಸ್ಕಾಂ ಇಇ ಲಕ್ಷ್ಮೀಶ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪತ್ತೆಯಾದ ಆಸ್ತಿ ವಿವರ ಇಂತಿದೆ.
9 ಲಕ್ಷ ರೂಪಾಯಿ ನಗದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ದಾಖಲೆ ಪತ್ತೆಯಾಗಿದೆ. ಮಾಗಡಿ ರಸ್ತೆಯ ಅಪಾರ್ಟ್ಮೆಂಟ್ ವೊಂದರಲ್ಲಿ ಫ್ಲಾಟ್, ಅರಸೀಕೆರೆ ತಾಲ್ಲೂಕಿನಲ್ಲಿ 1 ಮನೆ, 3 ಎಕರೆ ಜಮೀನು ಪತ್ತೆಯಾಗಿದೆ.
1 ಕಾರ್, 5.78 ಲಕ್ಷ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದ್ದು, ಮತ್ತಷ್ಟು ಸ್ಥಳಗಳಲ್ಲಿ ಎಸಿಬಿ ಪರಿಶೀಲನೆ ಮುಂದುವರಿಸಿದೆ ಎನ್ನಲಾಗಿದೆ.