ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಗಂಡಸ್ತನ ಪದ ಬಳಕೆ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಮಾತನಾಡುವ ಭರದಲ್ಲಿ ಗಂಡಸ್ತನದ ಬಗ್ಗೆ ಹೇಳಿದ್ದೇನೆ. ತಕ್ಷಣ ತಪ್ಪನ್ನು ಸರಿಪಡಿಸಿಕೊಂಡಿದ್ದೇನೆ. ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಪದ ಬಳಕೆ ಬಗ್ಗೆ ಅನ್ಯಥಾ ಭಾವಿಸಬೇಡಿ ಎಂದು ಹೇಳಿದ್ದಾರೆ.
BIG NEWS: ಶಾಂತಿ – ಸಂಯಮದಿಂದ ವರ್ತಿಸಿ; ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಮನವಿ
ರಾಜ್ಯದಲ್ಲಿ ಆರಂಭವಾಗಿರುವ ಹಲಾಲ್ ವಿವಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡುತ್ತಾ ಸರ್ಕಾರಕ್ಕೆ ಮಾನ ಮರ್ಯಾದಿ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದ ತಡೆಯಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದರು.