ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ 2022ರ ಜನವರಿಯಲ್ಲಿ ಯುಪಿಎಸ್ಸಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವು ಎಕ್ಸ್ಟ್ರಾ ಅಟೆಂಪ್ಟ್ಗೆ ಅವಕಾಶ ನೀಡುವ ಕುರಿತು ಗಮನ ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕೋವಿಡ್ ಸಾಂಕ್ರಾಮಿಕದಿಂದಾಗಿ ಯುಪಿಎಸ್ಸಿ ಪರೀಕ್ಷೆ ಬರೆಯುವ ಅವಕಾಶ ನೀಡುವಂತೆ ಶಿಫಾರಸು ಮಾಡಿದ ಸಂಸದೀಯ ಸಮಿತಿಯ ವರದಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಈ ಮಾಹಿತಿಯನ್ನು ನೀಡಿದೆ. ಹಾಗೂ 2 ದಿನಗಳ ಒಳಗಾಗಿ ವಿನಂತಿಯನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.
ಸಂಸದೀಯ ಸಮಿತಿಯು ನೀಡಿರುವ ವರದಿಯ ಅಡಿಯಲ್ಲಿ ಈ ವಿಷಯವನ್ನು ಪರಿಗಣಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಈ ಹಿಂದೆ ಮುಖ್ಯ ಪರೀಕ್ಷೆಗಳಿಗೆ ಹೆಚ್ಚುವರಿ ಪ್ರಯತ್ನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಹೇಳಿತ್ತು.