
ತುಮಕೂರು: ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ‘ನಡೆದಾಡೋ ದೇವರ ಬಸವ ಭಾರತ’ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.
ತ್ವಚೆಯ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ
ಈ ವೇಳೆ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ವೋದಯ ಪರಿಕಲ್ಪನೆ ಮಠದಲ್ಲಿ ನಿತ್ಯ ನಿರಂತರ. ಶಿವಕುಮಾರ ಸ್ವಾಮೀಜಿ ಜಯಂತಿಯನ್ನು ದಾಸೋಹದ ದಿನವನ್ನಾಗಿ ಆಚರಿಸಲಾಗುವುದು. ಶ್ರದ್ಧೆ, ನಿಷ್ಠೆ, ಪರಿಶ್ರಮ ಶಿವಕುಮಾರ ಸ್ವಾಮಿಜಿ ಧ್ಯೇಯವಾಗಿದೆ ಎಂದರು.
ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು. ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಘೋಷಿಸಿದರು.