ಶಿವಮೊಗ್ಗ: ಕುವೆಂಪು ವಿವಿಯ ದೂರಶಿಕ್ಷಣದ ಸ್ನಾತಕ ಪದವಿಗಳ ಪ್ರಥಮ ಮತ್ತು ದ್ವಿತೀಯ ವರ್ಷ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಗುವುದು.
ಕುವೆಂಪು ವಿಶ್ವವಿದ್ಯಾಲಯದ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಆವೃತ್ತಿಗೆ ಪ್ರವೇಶ ಪಡೆದ ದೂರಶಿಕ್ಷಣದ ಸ್ನಾತಕ ಪದವಿಗಳ ಪ್ರಥಮ ಮತ್ತು ದ್ವಿತೀಯ ವರ್ಷ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ ಮುಂದಿನ ಸೆಮಿಸ್ಟರ್ಗಳಿಗೆ ಮುಂಬಡ್ತಿ ನೀಡಲು ನಿರ್ಧರಿಸಿ ಫೆಬ್ರವರಿ 9 ರಂದು ಆದೇಶ ಹೊರಡಿಸಲಾಗಿತ್ತು.
ಆದರೆ, ಮಾರ್ಚ್ ತಿಂಗಳಿನಲ್ಲಿ ನಡೆದ ಸಿಂಡಿಕೇಟ್ ಸಾಮಾನ್ಯ ಸಭೆ ಮತ್ತು ವಿದ್ಯಾ ವಿಷಯಕ ಪರಿಷತ್ ಸಭೆಗಳ ನಿರ್ಣಯದಂತೆ ಈ ಕ್ರಮವನ್ನು ರದ್ದುಗೊಳಿಸಿ 2022ರ ಏಪ್ರಿಲ್ ಮಾಹೆಯ ಮೂರನೆ ವಾರದಲ್ಲಿ ನಿಯಮಾನುಸಾರ ಗುರುತಿಸಲಾಗುವ ಕಲಿಕಾ ಕೇಂದ್ರಗಳ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು.
ಸಂಬಂಧಿಸಿದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಈ ಮೂಲಕ ತಿಳಿಸಲಾಗಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.