ಕೊಲಂಬೊ: ದಶಕಗಳಲ್ಲಿಯೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದ ಹಿನ್ನಲೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಿದರು.
ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸರಬರಾಜು ಮತ್ತು ಅಗತ್ಯ ಸೇವೆಗಳ ನಿರ್ವಹಣೆ ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಗೆಜೆಟ್ ಅಧಿಸೂಚನೆಯಲ್ಲಿ ರಾಜಪಕ್ಸೆ ಹೇಳಿದ್ದಾರೆ.
ಗುರುವಾರ ನೂರಾರು ಪ್ರತಿಭಟನಾಕಾರರು ರಾಜಧಾನಿ ಕೊಲಂಬೊದ ಉಪನಗರದಲ್ಲಿರುವ ಅಧ್ಯಕ್ಷ ರಾಜಪಕ್ಸೆ ಅವರ ನಿವಾಸದ ಹೊರಗೆ ಪೊಲೀಸರು ಮತ್ತು ಮಿಲಿಟರಿಯೊಂದಿಗೆ ಘರ್ಷಣೆ ನಡೆಸಿದ್ದಾರೆ.
ಇಂಧನ ಮತ್ತು ಇತರ ಸರಕುಗಳು ಸೇರಿದಂತೆ ಅಗತ್ಯ ವಸ್ತುಗಳ ಕೊರತೆಯ ಕಾರಣ ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ಪೊಲೀಸರು 53 ಜನರನ್ನು ಬಂಧಿಸಿ ಶುಕ್ರವಾರ ಕೊಲಂಬೊ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ,