ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಡಿಜಿಟಲ್ ಮೂಲಕ ನೋಂದಣಿ ಮಾಡಲಾಗುತ್ತಿದೆ. ನಕಲಿ ಸದಸ್ಯತ್ವ ಕಂಡುಬಂದರೆ ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವುದಾಗಿ ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನೈಜ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರು ಪಕ್ಷದ ಮುಖಂಡರಿಗೆ ಈ ಕುರಿತು ಸೂಚನೆ ನೀಡಿದ್ದಾರೆ.
ನಕಲಿ ಸದಸ್ಯತ್ವ ಕಂಡುಬಂದರೆ ಅಂತಹ ಸದಸ್ಯತ್ವವನ್ನು ರದ್ದುಪಡಿಸಲಾಗುವುದು. ನೋಂದಣಿ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಏಪ್ರಿಲ್ 14ರ ವರೆಗೆ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದೆ. ಒಂದು ದೂರವಾಣಿ ಸಂಖ್ಯೆಗೆ ಆ ಕುಟುಂಬದ 5 ಮಂದಿಯನ್ನು ಸದಸ್ಯರನ್ನಾಗಿ ನೋಂದಾಯಿಸಲು ಅವಕಾಶವಿದೆ. ದೂರವಾಣಿ ಸಂಖ್ಯೆಗೆ ಬೇರೆ ಕುಟುಂಬದ ಸದಸ್ಯರನ್ನು ನೋಂದಾಯಿಸಿದರೆ ಮತದಾರರ ಪಟ್ಟಿ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗುತ್ತದೆ. ಅಲ್ಲದೇ, ಸದಸ್ಯತ್ವ ನೋಂದಣಿ ಆಗದಿರುವ ಬಗ್ಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು ಎಂದರು.
ನಕಲಿ ಸದಸ್ಯತ್ವ ಕಂಡುಬಂದರೆ ರದ್ದುಪಡಿಸಲಾಗುವುದು. ನೋಂದಣಿ ಮಾಡಿದವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.