ನವದೆಹಲಿ; ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮತ್ತೋರ್ವ ಪೊಲೀಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಂತಾಗಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಆಪ್ ಪಕ್ಷ ಸೇರ್ಪಡೆಯಾಗಿದ್ದಾರೆ. ಪಕ್ಷದ ಬಾವುಟ ನೀಡಿದ ಕೇಜ್ರಿವಾಲ್ ಮಾಜಿ ಐಪಿಎಸ್ ಅಧಿಕಾರಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ನಡೆಸಿದ್ದು, ಭಾಸ್ಕರ್ ರಾವ್ ಆಪ್ ನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.