alex Certify ಗನ್​ ಪಾಯಿಂಟ್ ಇಟ್ಟು ಬೆದರಿಸಿ ಲೂಟಿ…! ಬೆಚ್ಚಿಬೀಳಿಸುವಂತಿದೆ ಬೆಳ್ಳಂಬೆಳಗ್ಗೆ ನಡೆದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗನ್​ ಪಾಯಿಂಟ್ ಇಟ್ಟು ಬೆದರಿಸಿ ಲೂಟಿ…! ಬೆಚ್ಚಿಬೀಳಿಸುವಂತಿದೆ ಬೆಳ್ಳಂಬೆಳಗ್ಗೆ ನಡೆದ ಘಟನೆ

ಜನನಿಬಿಡ ಪ್ರದೇಶದಲ್ಲಿ ಬಂದೂಕು ತೋರಿಸಿ ಇಬ್ಬರನ್ನು ಲೂಟಿ ಮಾಡಿದ ಘಟನೆಯು ದೆಹಲಿಯ ವಿವೇಕ್ ವಿಹಾರ ಪ್ರದೇಶದ ಯಮುನಾ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​ ಬಳಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಬೆಳಗ್ಗೆ 6:15ರ ಸುಮಾರಿಗೆ ದೂರುದಾರ ತನ್ನ ಸ್ನೇಹಿತನೊಂದಿಗೆ ಮನೆಯಿಂದ ಯಮುನಾ ಸ್ಪೋರ್ಟ್ಸ್​​ ಕಾಂಪ್ಲೆಕ್ಸ್​ ಬಳಿ ವಾಯು ವಿಹಾರ ಮಾಡುತ್ತಿದ್ದ ವೇಳೆಯಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ಪಿಸ್ತೂಲ್​ ತೋರಿಸಿ ಬೆದರಿಕೆ ಹಾಕಿ ಚಿನ್ನದ ಕಡಗವನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

— ANI (@ANI) April 3, 2022

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...