ಚಿತ್ರದುರ್ಗ: ಬಾಬು ಜಗಜೀವನ ರಾಮ್ ಜಯಂತಿ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮನಕ್ಕೆ ಮುನ್ನ ಸುಧಾಕರ್ ಮತ್ತು ಸೋಮಶೇಖರ್ ಬೆಂಬಲಿಗರ ಮಧ್ಯೆ ಗಲಾಟೆಯಾಗಿದೆ.
ಹಿರಿಯೂರಿನಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಘಟನೆ ನಡೆದಿದ್ದು, ಗಲಭೆಯಲ್ಲಿ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.