ನವದೆಹಲಿ: ನಾಳೆ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 6 ರಂದು ಎಲ್ಲಾ ಬಿಜೆಪಿ ಕಾರ್ಯಕರ್ತರು, ಸಚಿವರು, ಸಂಸದರು, ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ಏಪ್ರಿಲ್ 7 ರಿಂದ 20 ರವರೆಗೆ ದೇಶಾದ್ಯಂತ ಸಾಮಾಜಿಕ ನ್ಯಾಯದ ಕುರಿತು ಸಭೆಗಳು ಮತ್ತು ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಿಎಂ ನರೇಂದ್ರ ಮೋದಿ ಅವರು ಬಿಜೆಪಿ ಸಂಸ್ಥಾಪನಾ ದಿನದಂದು ಏಪ್ರಿಲ್ 6 ರಂದು ಎಲ್ಲಾ ಬಿಜೆಪಿ ಕಾರ್ಯಕರ್ತರು, ಸಚಿವರು, ಸಂಸದರು, ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 7 ರಿಂದ 20 ರವರೆಗೆ ದೇಶಾದ್ಯಂತ ಸಾಮಾಜಿಕ ನ್ಯಾಯದ ವಿಷಯದ ಕುರಿತು ಸಭೆಗಳು ಮತ್ತು ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಅರುಣ್ ಸಿಂಗ್ ಹೇಳಿದ್ದಾರೆ.