ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಭರವಸೆ ನೀಡಿದಂತೆ ಮಾಜಿ ಕುಸ್ತಿಪಟುಗಳ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ.
ಮಾಜಿ ಕುಸ್ತಿಪಟುಗಳ ಮಾಸಾಶನ 1000 ರೂ. ಹೆಚ್ಚಳ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಮಟ್ಟದ ಕುಸ್ತಿಪಟುಗಳಿಗೆ 2500 ರಿಂದ 3500 ರೂ., ರಾಷ್ಟ್ರಮಟ್ಟದ ಕುಸ್ತಿ ಪಟುಗಳಿಗೆ 3000 ದಿಂದ 4000 ರೂಪಾಯಿ, ಅಂತರರಾಷ್ಟ್ರೀಯ ಕುಸ್ತಿ ಪಟುಗಳಿಗೆ 4000 ರೂ.ನಿಂದ 5 ಸಾವಿರ ರೂಪಾಯಿಗೆ ಮಾಸಾಶನ ಹೆಚ್ಚಳ ಮಾಡಲಾಗಿದ್ದು, ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.