ಬೆಂಗಳೂರು: ಸನ್ಯಾಸತ್ವ ಸ್ವೀಕರಿಸಲಿರುವ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಆಗಲಿದ್ದಾರೆ.
ಮೇ 6 ರಂದು ಪುಟ್ಟಸ್ವಾಮಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ. ಮೇ 15 ರಂದು ಮಾಜಿ ಸಚಿವ ಪುಟ್ಟಸ್ವಾಮಿ ಅವರಿಗೆ ಪಟ್ಟಾಭಿಷೇಕ ನಡೆಯಲಿದೆ. ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ದೀಕ್ಷೆ ನೀಡಲಿದ್ದಾರೆ. ಸನ್ಯಾಸತ್ವ ದೀಕ್ಷೆ ಪಡೆಯುವ ಮೊದಲು ಪುಟ್ಟಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಪುಟ್ಟಸ್ವಾಮಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ನೆಲಮಂಗಲ ಸಮೀಪದ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಲು 82 ವರ್ಷದ ಬಿ.ಜೆ. ಪುಟ್ಟಸ್ವಾಮಿ ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.